alex Certify BIG NEWS: ಉಕ್ರೇನ್ ನಲ್ಲಿ ಬಲಿಯಾದ ರಾಜ್ಯದ ಮೆಡಿಕಲ್ ವಿದ್ಯಾರ್ಥಿ; ಮತ್ತಷ್ಟು ತೀವ್ರಗೊಂಡ NEET ಬ್ಯಾನ್ ಆಕ್ರೋಶ; ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲವೇ….? HDK ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಕ್ರೇನ್ ನಲ್ಲಿ ಬಲಿಯಾದ ರಾಜ್ಯದ ಮೆಡಿಕಲ್ ವಿದ್ಯಾರ್ಥಿ; ಮತ್ತಷ್ಟು ತೀವ್ರಗೊಂಡ NEET ಬ್ಯಾನ್ ಆಕ್ರೋಶ; ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲವೇ….? HDK ಕಿಡಿ

ಬೆಂಗಳೂರು: NEET ಪರೀಕ್ಷೆ ನಿಷೇಧಿಸಬೇಕು ಎಂಬ ಆಗ್ರಹಗಳು ಕೇಳಿಬರುತ್ತಿದ್ದ ಬೆನ್ನಲ್ಲೇ ಇದೀಗ ರಾಜ್ಯದ ಮೆಡಿಕಲ್ ವಿದ್ಯಾರ್ಥಿ ನವೀನ್ ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಬಲಿಯಾದ ಬಳಿಕ ನೀಟ್ ಬ್ಯಾನ್ ಗೆ ಒತ್ತಾಯಿಸಿ ಅಭಿಯಾನಗಳು ರಾಜ್ಯದಲ್ಲಿ ತೀವ್ರಗೊಂಡಿದೆ.

ಇದೀಗ ನೀಟ್ ಬ್ಯಾನ್ ಗೆ ಆಗ್ರಹಿಸಿ ನಡೆಸುತ್ತಿರುವ ಅಭಿಯಾನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೈ ಜೋಡಿಸಿದ್ದು, ನೀಟ್ ನಿಲ್ಲಿಸಿ, stopneet, save KA students ಹ್ಯಾಷ್ ಟ್ಯಾಗ್ ಗಳನ್ನು ಬಳಸಿ ಜೆಡಿಎಸ್ ನಿಂದಲೂ ಅಭಿಯಾನ ಆರಂಭವಾಗಿದೆ.

ನಾವು ನೀಟ್ ಪರೀಕ್ಷೆ ವಿರೋಧಿಸುತ್ತೇವೆ ಎಂದಿರುವ ಕುಮಾರಸ್ವಾಮಿ, 2023ರಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಅಲ್ಲದೇ ನೀಟ್ ಪರ ನಿಂತಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿರುದ್ಧ ಕಿಡಿಕಾರಿದ್ದಾರೆ.

ನೀಟ್ ವಿರೋಧಿಸುವವರು ಧನದಾಹಿಗಳು, ದ್ರೋಹಿಗಳು ಎಂದು ಉನ್ನತ ಶಿಕ್ಷಣ ಸಚಿವರು ಯಾರನ್ನು ಉದ್ದೇಶಿಸಿ ಹೇಳಿದ್ದು ಎನ್ನುವುದನ್ನು ಅವರೇ ತಿಳಿಸಬೇಕು. ಪ್ರಶ್ನೆ ಮಾಡಿದರೆ ದ್ರೋಹವೇ? ಧನದಾಹವೇ? ಈ ಹಣಿಪಟ್ಟಿ ಬಗ್ಗೆ ಏನೂ ಹೇಳಬೇಕೋ ಕಾಣೆ… ನಾನು ಮೆಡಿಕಲ್ ಕಾಲೇಜು ನಡೆಸುತ್ತಿಲ್ಲ. ಎಂಜಿನಿಯರಿಂಗ್ ಕಾಲೇಜನ್ನೂ ನಡೆಸುತ್ತಿಲ್ಲ. ಕೊನೆಪಕ್ಷ ಒಂದು ಸಣ್ಣ ಕೈಗಾರಿಕೆಯೂ ಇಲ್ಲ. ಬಿಡದಿಯ ತೋಟ ಬಿಟ್ಟರೆ ನನ್ನದೂ ಎನ್ನುವಂಥದ್ದು ಏನೂ ಇಲ್ಲ. ಆದರೂ, ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಇಂತಹ ಹೇಳಿಕೆ ನೀಡಿ ನಾಲಿಗೆ ಜಾರಿ, ತಮ್ಮ ಉನ್ನತ ಗುಣವನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಕೇಂದ್ರದ ಸಚಿವರೊಬ್ಬರು, ನೀಟ್ ಪರೀಕ್ಷೆ ಪಾಸ್ ಮಾಡಲಾಗದ ವಿಧ್ಯಾರ್ಥಿಗಳು ವಿದೇಶಕ್ಕೆ ಹೋಗುತ್ತಾರೆ ಎಂದು ಆ ಮಕ್ಕಳ ಸ್ವಾಭಿಮಾನವನ್ನು ಅಪಮಾನಿಸಿದ್ದಾರೆ. ರಾಜ್ಯದ ಉನ್ನತ ಶಿಕ್ಷಣ ಸಚಿವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದ್ರೋಹದ ಹಣೆಪಟ್ಟಿ ಕಟ್ಟಿ ದೊಡ್ಡತನ ಮೆರೆದಿದ್ದಾರೆ. ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಅತ್ಮರೋಧನೆ ಕೇಳುತ್ತಿಲ್ಲವೇ? ಇದೆಲ್ಲವೂ ಸರಕಾರಗಳ ಕಣ್ಣಿಗೆ ಕಾಣುತ್ತಿಲ್ಲ, ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ ಎಂದು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...