ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ 22,000 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ. ಕನ್ನಡಿಗ ವಿದ್ಯಾರ್ಥಿ ನವೀನ್ ರಷ್ಯಾ ದಾಳಿಯಲ್ಲಿ ಬಲಿಯಾಗಿರುವುದು ದುರದೃಷ್ಟಕರ ಎಂದು ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತಂದ ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಉಕ್ರೇನ್ ನಿಂದ ವಾಪಸ್ ಆದ ಎಲ್ಲಾ ಮೆಡಿಕಲ್ ವಿದ್ಯಾರ್ಥಿಗಳಿಗೂ ಮುಂದಿನ ಶೈಕ್ಷಣಿಕ ವಿದ್ಯಾಭ್ಯಾಸದ ಬಗ್ಗೆ ವ್ಯವಸ್ಥೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದರು.
SHOCKING NEWS: ನರ್ಸ್ ವೇಷದಲ್ಲಿ ಬಂದ ಕಳ್ಳರು; ನವಜಾತ ಗಂಡು ಮಗುವನ್ನೆ ಕದ್ದು ಪರಾರಿ; ಬೆಚ್ಚಿ ಬೀಳಿಸುವಂತಿದೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಘೋರ ಘಟನೆ
ವಿದ್ಯಾರ್ಥಿಗಳ ಮೆಡಿಕಲ್ ಶುಲ್ಕ ಕಡಿಮೆ ಮಾಡುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಉಕ್ರೇನ್ ನಿಂದ ವಾಪಸ್ ಆದ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.