alex Certify BIG NEWS: ಉಕ್ರೇನ್ ನಿಂದ ವಾಪಸ್ ಆದ ಮೆಡಿಕಲ್ ವಿದ್ಯಾರ್ಥಿಗಳ ಭವಿಷ್ಯವೇನು….? ಕೇಂದ್ರ-ರಾಜ್ಯ ಸರ್ಕಾರಗಳು ಅಂತಃಕರಣದಿಂದ ಆಲೋಚಿಸಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಕ್ರೇನ್ ನಿಂದ ವಾಪಸ್ ಆದ ಮೆಡಿಕಲ್ ವಿದ್ಯಾರ್ಥಿಗಳ ಭವಿಷ್ಯವೇನು….? ಕೇಂದ್ರ-ರಾಜ್ಯ ಸರ್ಕಾರಗಳು ಅಂತಃಕರಣದಿಂದ ಆಲೋಚಿಸಲಿ

ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಿಂದ ವೈದ್ಯಕೀಯ ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸಿ ವಾಪಸ್ ಆದ ವಿದ್ಯಾರ್ಥಿಗಳ ಭವಿಷ್ಯವೇನು? ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

‘ಆಪರೇಷನ್‌ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್‌ʼನಿಂದ ವಿದ್ಯಾರ್ಥಿಗಳನ್ನು ಏರ್‌ʼಲಿಫ್ಟ್‌ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. ಹೀಗಿರುವಾಗ ವಿದ್ಯಾರ್ಥಿಗಳ ಮುಂದಿನ ಭವಿಷ್ಯವೇನು? ಎಂದು ಸರಣಿ ಟ್ವೀಟ್ ಮೂಲಕ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕಲಬುರಗಿಗಿಂತ ಐದು ಪಟ್ಟು ಹೆಚ್ಚಿದೆ ಬೆಂಗಳೂರಿನ ತಲಾ ಆದಾಯ; ಆರ್ಥಿಕ ಸಮೀಕ್ಷೆಯಲ್ಲಿ ಶಾಕಿಂಗ್ ಮಾಹಿತಿಗಳು ಬಹಿರಂಗ

ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್‌ʼಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ. ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ ಎಂದು ಹೇಳಿದ್ದಾರೆ.

2,65,720 ಕೋಟಿ ರೂ.ಗಳಷ್ಟು ಬಜೆಟ್‌ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್‌ ಮೂಲಕ 50% ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಲಿ ಎನ್ನುವುದು ನನ್ನ ಅಭಿಪ್ರಾಯ.

ʼವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ʼಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ.ʼ ಕೇಂದ್ರ-ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...