ಬೆಂಗಳೂರು: ರಷ್ಯಾ ಹಾಗೂ ಉಕ್ರೇನ್ ಯುದ್ಧದಿಂದಾಗಿ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಲು ಮುಂದಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಉಕ್ರೇನ್ ನಲ್ಲಿ ರಷ್ಯಾ ದಾಳಿ ಹಿನ್ನೆಲೆಯಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಗ್ರಾಮದಲ್ಲಿ ಗರ್ಭಿಣಿ ಕತ್ತೆಗೆ ನಡೆದಿದೆ ಸೀಮಂತ ಕಾರ್ಯ..!
ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಾಗುವುದು. ಈ ನಿಟ್ಟಿನಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಜತೆಗೂ ಸಂಪರ್ಕ ನಡೆಸಿದ್ದೇವೆ. ಕನ್ನಡಿಗರಿಗೆ ಯಾವುದೇ ತೊಂದರೆಯಾಗಿಲ್ಲ ಆತಂಕ ಬೇಡ ಎಂದು ಹೇಳಿದರು.
ವೈದ್ಯಕೀಯ ವ್ಯಾಸಂಗಕ್ಕಾಗಿ ರಾಜ್ಯದ ವಿದ್ಯಾರ್ಥಿಗಳು ಉಕ್ರೇನ್ ಗೆ ತೆರಳಿದ್ದಾರೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿರುವುದರಿಂದ ವಿಮಾನ ಹಾರಾಟ ಸ್ಥಗಿತಗೊಂಡಿದೆ. ಹಾಗಾಗಿ ವಾಪಸ್ ಬರಲು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಉಕ್ರೇನ್ ನ ಪಶ್ಚಿಮ ಭಾಗದಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸುವ ಬಗ್ಗೆ ಚರ್ಚೆ ನಡೆದಿದೆ. ಭಾರತೀಯ ರಾಯಭಾರಿ ಕಚೇರಿ ಮಾಹಿತಿ ನೀಡಿದ ಬಳಿಕ ತಕ್ಷಣ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ತಿಳಿಸಿದರು.