ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನದ ಬಳಿಕವೂ ನಾಯಕತ್ವ ಬದಲಾವಣೆ ಚರ್ಚೆಗೆ ಬ್ರೇಕ್ ಬಿದ್ದಿಲ್ಲ. ಇದೀಗ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯಿತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ ಎಂದು ಒತ್ತಾಯಿಸಿದ್ದಾರೆ.
ಅರುಣ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಸಿಎಂ ಬದಲಾವಣೆ ವಿಚಾರಕ್ಕೂ ನಮಗೂ ಸಂಬಂಧವಿಲ್ಲ. ನಾವು ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಲೂ ಇಲ್ಲ. ಆದರೆ ರಾಜ್ಯದಲ್ಲಿ ಕೆಲ ನಾಯಕರಿಂದಲೇ ಇಂತಹ ಹೇಳಿಕೆ ಬರುತ್ತಿರುವುದರಿಂದ ಸುಮ್ಮನೆ ಇರಲು ಸಾಧ್ಯವಿಲ್ಲ. ಒಂದುವೇಳೆ ವರಿಷ್ಠರು ಸಿಎಂ ಬದಲಾವಣೆಗೆ ಚಿಂತನೆ ನಡೆಸಿದರೆ ನಮ್ಮ ಲಿಂಗಾಯತ ಸಮುದಾಯಕ್ಕೆ ಸ್ಥಾನ ನೀಡಬೇಕು ಎಂದು ಹೇಳಿದ್ದೇನೆ ಎಂದರು.
ಗನ್ ಪಾಯಿಂಟ್ ನಲ್ಲಿ ಅತ್ಯಾಚಾರ, ಬೆತ್ತಲೆ ಫೋಟೋ ತೆಗೆದು ಬೆದರಿಕೆ – ಗ್ರಾಪಂ ಸದಸ್ಯ ಸೇರಿ ಇಬ್ಬರು ಅರೆಸ್ಟ್
ನಮ್ಮ ಸಮುದಾಯದಲ್ಲಿ ಪರ್ಯಾಯ ನಾಯಕರಿಲ್ಲ ಎಂಬು ಅಪಾರ್ಥ ಮಾಡಲು ಹೋಗಬೇಡಿ. ಸಮರ್ಥರಾದ ಪರ್ಯಾಯ ನಾಯಕರು ಉತ್ತರ ಕರ್ನಾಟಕದಲ್ಲಿದ್ದಾರೆ. ಒಂದು ವೇಳೆ ಸಿಎಂ ಬದಲಾವಣೆ ಪ್ರಯತ್ನ ಮಾಡಿದರೆ ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಬೇಕು ಎಂಬುದು ನಮ್ಮ ಆಶಯ. ನಾವು ಒತ್ತಡ ಹೇರುತ್ತಿಲ್ಲ. ಸಲಹೆ ಗಳನ್ನು ಮಾತ್ರ ನೀಡಬಹುದು ಎಂದು ಹೇಳಿದರು.