ಹುಬ್ಬಳ್ಳಿ; ಕರ್ನಾಟಕ ಅಖಂಡವಾಗಿರಬೇಕು ಪ್ರತ್ಯೇಕ ರಾಜ್ಯ ಮಾಡಬೇಕು ಎಂಬುದು ಮೂರ್ಖತನದ ಹೇಳಿಕೆ ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ, ಪ್ರತ್ಯೇಕ ರಾಜ್ಯ ಎಂಬ ಮಾತು ಸರಿಯಲ್ಲ. ಕರ್ನಾಟಕ ಏಕಿಕರಣದಲ್ಲಿ ನಡೆದ ಹೋರಾಟ ನೆನಪಿಸಿಕೊಳ್ಳಲಿ. ಸಚಿವ ಉಮೇಶ್ ಕತ್ತಿ ಹೇಳಿಕೆಯನ್ನು ಬಿಜೆಪಿಯಲ್ಲಿ ಯಾರು ಖಂಡಿಸುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ನಾನು ಬಿಜೆಪಿ ಪಕ್ಷದವನಾಗಿ ಕತ್ತಿ ಹೇಳಿಕೆ ಖಂಡಿಸುತ್ತೇನೆ ಎಂದು ಹೇಳಿದರು.
ಏಕೀಕರಣದ ಹೋರಾಟದ ಉದ್ದೇಶ ಸಹಬಾಳ್ವೆ. ಏಕಿರಣದ ಉದ್ದೇಶವನ್ನೇ ಮರೆತು ಸಚಿವರು ಮಾತನಾಡುವುದು ಸರಿಯಲ್ಲ. ಪ್ರಾದೇಶಿಕ ಅಸಮಾನತೆಯನ್ನು ಸರಿಪಡಿಸಲು ಸರ್ಕಾರಕ್ಕೆ ಕೇಳೋಣ. ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯದ ಕೂಗು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು.