ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿಧಾನಸಭೆಯಲ್ಲಿ ಶಾಸಕರು ಪಕ್ಷಾತೀತವಾಗಿ ಸದನದ ಬಾವಿಗಿಳಿದು ಧರಣಿ ನಡೆಸಿದ ಪ್ರಸಂಗ ನಡೆದಿದೆ.
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ವಿಚಾರವಾಗಿ ನಂಜುಂಡಪ್ಪ ವರದಿ ಪ್ರಸ್ತಾಪಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕ ಎಂದು ರಾಜ್ಯ ಸರ್ಕಾರ ನಾಮಕರಣ ಮಾಡಿದೆ. ಎರಡೂವರೆ ವರ್ಷವಾದರೂ ಒಂದು ಬೋರ್ಡ್ ನಿರ್ಮಿಸಿಲ್ಲ. ಸರ್ಕಾರಕ್ಕೆ ಈ ಭಾಗದ ಅಭಿವೃದ್ಧಿ ಕುರಿತು ಯೋಚನೆಯೂ ಇದ್ದಂತಿಲ್ಲ. ವಿಚಿತ್ರವೆಂದರೆ ಉತ್ತರ ಕರ್ನಾಟಕ ಭಾಗದ ಬಹುತೇಕ ಶಾಸಕರೇ ಕಲಾಪಕ್ಕೆ ಗೈರಾಗಿದ್ದಾರೆ ಎಂದು ಟೀಕಿಸಿದರು.
ಹೊಸ ವರ್ಷದ ಸಂಭ್ರಮಾಚರಣೆ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’
ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ಪ್ರಿಯಾಂಕ್ ಖರ್ಗೆ ದ್ವನಿಗೂಡಿಸಿದ್ದು, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಸಮಗ್ರ ಚರ್ಚೆಯಾಗಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಎ.ಎಸ್. ಪಾಟೀಲ್ ನಡಹಳ್ಳಿ ಸೇರಿದಂತೆ ಜೆಡಿಎಸ್, ಕಾಂಗ್ರೆಸ್ ಸದಸ್ಯರು ಕೂಡ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಸದನದ ಬಾವಿಗಿಳಿದು ಒಕ್ಕೊರಲಿನಿಂದ ಧರಣಿ ನಡೆಸಿದರು.