ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಬಿಜೆಪಿ ಅಭ್ಯರ್ಥಿ ದಯಾ ಶಂಕರ್ ಸಿಂಗ್ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಅಖರ್ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ದಾಳಿಯಲ್ಲಿ ಸಿಂಗ್ರ ಕಾರಿನ ಗಾಜು ಪುಡಿಯಾಗಿದೆ ಎನ್ನಲಾಗಿದೆ. ಇದು ಸಮಾಜವಾದಿ ಪಕ್ಷದವರ ಕೃತ್ಯ ಎಂದು ದಯಾ ಶಂಕರ್ ಸಿಂಗ್ ಆರೋಪಿಸಿದ್ದಾರೆ.
ಈ ವಿಚಾರವಾಗಿ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಫಾರ್ಚುನರ್ ಕಾರಿನಲ್ಲಿ ಬಂದಿದ್ದ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಈ ವಿಚಾರವಾಗಿ ತನಿಖೆ ನಡೆಸಲಾಗುತ್ತಿದ್ದು ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಬಲ್ಲಿಯಾದ ಸದರ್ ಕ್ಷೇತ್ರದಿಂದ ದಯಾಶಂಕರ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅಂದಹಾಗೆ ದಯಾಶಂಕರ್ ಈ ರೀತಿ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಸಿಂಗ್ ಹಾಗೂ ಅವರ ಪತ್ನಿ ಸ್ವಾತಿ ಸಿಂಗ್ ಇಬ್ಬರೂ ಪಕ್ಷದ ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ಬಿಜೆಪಿ ದಯಾಶಂಕರ್ಗೆ ಟಿಕೆಟ್ ನೀಡಿದೆ. ಹಾಗೂ ಸ್ವಾತಿ ಮನವಿಯನ್ನು ತಿರಸ್ಕರಿಸಿತ್ತು.