alex Certify BIG NEWS: ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ಕರ್ನಾಟಕದಲ್ಲೂ ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ಕರ್ನಾಟಕದಲ್ಲೂ ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ

ಬೆಂಗಳೂರು: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದ್ದು, 268 ಕ್ಷೇತ್ರಗಳಲ್ಲಿ ಗೆಲುವು ಪಡೆದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಕೊರೊನಾ ಸಾಂಕ್ರಾಮಿಕದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿದ ವಿದ್ಯಾರ್ಥಿಗಳ ಸಂಖ್ಯೆ: ಸಮೀಕ್ಷೆಯಲ್ಲಿ ಬಹಿರಂಗ

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಭಾವುರಾವ್ ದೇಶಪಾಂಡೆ ಚಿತ್ರಪಟಕ್ಕೆ ಪುಷ್ಪ ನಮನ ಸಲ್ಲಿಸಿ, ಬಳಿಕ ಪ್ರಧಾನಿ ಮೋದಿ ಪೋಟೋ, ಬಿಜೆಪಿ ಧ್ವಜ ಹಿಡಿದು ಕಾರ್ಯಕರ್ತರು ಕುಣಿದು ಕುಪ್ಪಳಿಸಿದ್ದಾರೆ.

BIG NEWS: ನಾವು ಫೋರ್ ಹೊಡೆಯುತ್ತೇವೆ; ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಖಚಿತ ಎಂದ ಅಶ್ವತ್ಥನಾರಾಯಣ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶಾಸಕರಾದ ಬೆಳ್ಳಿ ಪ್ರಕಾಶ್, ವಿಶ್ವನಾಥ್, ಸಚಿವ ಮುನಿರತ್ನ, ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದೇ ವೇಳೆ ಬೆಂಗಳೂರಿನ ಮಹದೇವಪುರ ಕ್ಷೇತ್ರದ ಹೂಡಿ ಗ್ರಾಮದ ಶಿವ ದೇವಾಲಯದಲ್ಲಿ ಬಿಜೆಪಿ ಕಾರ್ಯಕರ್ತ ಮಂಜುನಾಥ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಇತ್ತ ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕಚೇರಿಯಲ್ಲಿಯೂ ಬಿಜೆಪಿ ನಾಯಕರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...