ಮೈಸೂರು: ರಾಮನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿರುವ ವಿಚಾರವಾಗಿ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, 3 ವರ್ಷ ಸುಮ್ಮನಿದ್ದು ಸರ್ಕಾರ ಈಗ ಯಾಕೆ ಶಂಕುಸ್ಥಾಪನೆ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಯಾವ ಪುರುಷಾರ್ಥಕ್ಕೆ ಈಗ ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ ? ಬಿಜೆಪಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಇದ್ಯಾವುದೂ ಹೆಚ್ಚು ದಿನ ನಡೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಉತ್ತರ ಪ್ರದೇಶದ ರೀತಿ ಕರ್ನಾಟಕವನ್ನು ಮಾಡಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.