ನವದೆಹಲಿ: ಪಂಚರಾಜ್ಯಗಳ ಚುನಾವಣಾ ಮತ ಎಣಿಕೆ ಬರದಿಂದ ಸಾಗಿದ್ದು, ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಗೆಲುವಿನತ್ತ ದಾಪುಗಾಲಿಟ್ಟಿದೆ. ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್ ನಲ್ಲಿ ಬಿಜೆಪಿಗೆ ಭಾರಿ ಲೀಡ್ ಸಿಕ್ಕಿದೆ. ಆದರೆ ಗೋವಾ ಹಾಗೂ ಮಣಿಪುರ ವಿಧಾನಸಭೆ ಮತ್ತೆ ಅತಂತ್ರವಾಗುವ ಸಾಧ್ಯತೆ ದಟ್ಟವಾಗಿದೆ.
ಪಂಜಾಬ್ ನ 117 ವಿಧಾನಸಭಾ ಕ್ಷೇತ್ರಗಳಲ್ಲಿ 89 ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ ಕೇವಲ 13 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಉತ್ತರ ಪ್ರದೆಶದ 403 ವಿಧಾನಸಭಾ ಕ್ಷೇತ್ರಗಳಲ್ಲಿ 259 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 128 ಕ್ಷೇತ್ರಗಳಲ್ಲಿ ಎಸ್ ಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳ ಪೈಕಿ 47 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಮಣಿಪುರದ 60 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 30 ಹಾಗೂ ಕಾಂಗ್ರೆಸ್ 9, ಗೋವಾದ 40 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 18 ಹಾಗೂ ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.