ಬೆಂಗಳೂರು: ಉತ್ತರ ಪ್ರದೇಶ ಮಾಜಿ ಸಿಎಂ ಮಾಯಾವತಿಗೆ ಕರ್ನಾಟಕ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಚುನಾವಣೆ ಪ್ರಚಾರದ ವೇಳೆ ಅಕ್ರಮ ಹಣ ಪತ್ತೆ ಕೇಸ್ ಗೆ ಸಂಬಂಧಿಸಿದಂತೆ ಮಾಯಾವತಿ ವಿರುದ್ಧದ ಪ್ರಕರಣ ರದ್ದುಗೊಳಿಸಿ ನ್ಯಾ.ಎಸ್.ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
2013ರಲ್ಲಿ ನಡೆದ ಕಲಬುರ್ಗಿ ಚುನಾವಣಾ ಪ್ರಚಾರದ ವೇಳೆ ಹಣ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿ ಎಸ್ ಪಿ ನಾಯಕಿ ಮಾಯಾವತಿ ಹಾಗೂ ಸತೀಶ್ ಮಿಶ್ರಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣವನ್ನು ಕೋರ್ಟ್ ರದ್ದುಗೊಳಿಸಿದೆ.