ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಹರಿಯಾಣದ ಸೂರಜ್ ಕುಂಡ್ ನಲ್ಲಿ ನಡೆಯುತ್ತಿರುವ ಎಲ್ಲ ರಾಜ್ಯಗಳ ಗೃಹ ಸಚಿವರ ಸಮ್ಮೇಳನದಲ್ಲಿ ಅರಗ ಜ್ಞಾನೇಂದ್ರ ಭಾಗವಹಿಸಿದ್ದಾರೆ.
ಈ ಸಂದರ್ಭದಲ್ಲಿ ಅವರು ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೊಂದಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.