ಕಲಬುರ್ಗಿ: ಕಲ್ಲು ತೂರಾಟ ಪ್ರಕರಣದ ಬೆನ್ನಲ್ಲೇ ಉದ್ವಿಗ್ನಗೊಂಡಿದ್ದ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 6ವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರೆಸಲಾಗಿದ್ದು, ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ. ಶಾಂತಿ-ಸುವ್ಯವಸ್ಥೆಗೆ ಯಾವುದೇ ರೀತಿ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹಾಲು ಉತ್ಪಾದಕರು, ಕುರಿಗಾಹಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್
ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಆರಂಭವಾಗಿತ್ತಲ್ಲದೇ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರು, ಜಿಲ್ಲಾಧಿಕಾರಿಗಳ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಪ್ರಕರಣ ಸಂಬಂಧ 165 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.