ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಉದ್ವಿಗ್ನಗೊಂಡಿದ್ದು, ಈ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ವಿಸ್ತರಣೆ ಮಾಡಿದೆ.
ಮಂಗಳೂರು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ನಾಳೆ ಮಧ್ಯಾಹ್ನ 2 ಗಂಟೆಯವರೆಗೂ ವಿಸ್ತರಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಬೆಳ್ಳಾರೆ, ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, 5ಕ್ಕಿಂತ ಹೆಚ್ಚು ಜನ ಒಂದೆಡೆ ಸೇರದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಈ ನಡುವೆ ಪ್ರವೀಣ್ ನೆಟ್ಟಾರು ಊರಾದ ಬೆಳ್ಳಾರಿಯಲ್ಲಿ ಸಧ್ಯ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.