alex Certify BIG NEWS: ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ; ದಕ್ಷಿಣ ಕನ್ನಡದಲ್ಲಿ ನಿಷೇಧಾಜ್ಞೆ ವಿಸ್ತರಿಸಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ; ದಕ್ಷಿಣ ಕನ್ನಡದಲ್ಲಿ ನಿಷೇಧಾಜ್ಞೆ ವಿಸ್ತರಿಸಿ ಆದೇಶ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಉದ್ವಿಗ್ನಗೊಂಡಿದ್ದು, ಈ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ವಿಸ್ತರಣೆ ಮಾಡಿದೆ.

ಮಂಗಳೂರು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ನಾಳೆ ಮಧ್ಯಾಹ್ನ 2 ಗಂಟೆಯವರೆಗೂ ವಿಸ್ತರಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಬೆಳ್ಳಾರೆ, ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, 5ಕ್ಕಿಂತ ಹೆಚ್ಚು ಜನ ಒಂದೆಡೆ ಸೇರದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಈ ನಡುವೆ ಪ್ರವೀಣ್ ನೆಟ್ಟಾರು ಊರಾದ ಬೆಳ್ಳಾರಿಯಲ್ಲಿ ಸಧ್ಯ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...