alex Certify BIG NEWS: ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ; ಸಿಎಂ ಬೊಮ್ಮಾಯಿ ವಿಶ್ವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ; ಸಿಎಂ ಬೊಮ್ಮಾಯಿ ವಿಶ್ವಾಸ

ಬೆಂಗಳೂರು: ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಮೂರು ಪಕ್ಷಗಳ ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಉಪಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಇನ್ನೆರಡು ಗಂಟೆಗಳಲ್ಲಿ ನಿಚ್ಚಳ ಫಲಿತಾಂಶ ಹೊರಬೀಳಲಿದೆ ಎಂದು ಹೇಳಿದರು.

ಆಭರಣ ಪ್ರಿಯರಿಗೆ ಭರ್ಜರಿ‌ ಗುಡ್ ನ್ಯೂಸ್:‌ ಧನ್‌ ತೇರಸ್‌ ದಿನ ಚಿನ್ನ – ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ

ಸಿಂದಗಿ ಕ್ಷೇತ್ರದಲ್ಲಿ 5 ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, 5 ಸುತ್ತಿನ ಮತ ಎಣಿಕೆಯಲ್ಲಿಯೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಹಾನಗಲ್ ನಲ್ಲಿ ಮೂರು ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಒಟ್ಟಾರೆ ಸಿಂದಗಿ ಹಾಗೂ ಹಾನಗಲ್ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...