alex Certify BIG NEWS: ಉಪಚುನಾವಣೆ; ಸಿಂದಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಪಚುನಾವಣೆ; ಸಿಂದಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು: ಹಾನಗಲ್, ಸಿಂದಗಿ ಉಪಚುನಾವಣಾ ದಿನಾಂಕ ಫಿಕ್ಸ್ ಆಗುತ್ತಿದ್ದಂತೆ ಕಾಂಗ್ರೆಸ್ ಸಿಂದಗಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಸಿಂದಗಿ ಕ್ಷೇತ್ರಕ್ಕೆ ಅಶೋಕ್ ಮನಗೂಳಿ ಅವರಿಗೆ ಟಿಕೆಟ್ ನೀಡಲಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಘೋಷಣೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂಧಗಿ ಕ್ಷೇತ್ರಕ್ಕೆ ಅಶೋಕ್ ಮುನಗೂಳಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಹಾನಗಲ್ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಪಕ್ಷದ ವರಿಷ್ಠರು ಸೂಚಿಸಲಿದ್ದಾರೆ. ಹಾನಗಲ್ ನಲ್ಲಿ ಹಲವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿದ್ದು, ಮನೋಹರ್ ತಹಶಿಲ್ದಾರ್, ಶ್ರೀನಿವಾಸ್ ಮಾನೆ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಕೆಪಿಸಿಸಿ ಅಧ್ಯಕ್ಷರು, ವಿಪಕ್ಷ ನಾಯಕರು, ಕಾಂಗ್ರೆಸ್ ಹೈಕಮಾಂಡ್ ಯಾರ ಹೆಸರನ್ನು ಫೈನಲ್ ಮಾಡುತ್ತಾರೆ ಅವರಿಗೆ ಟಿಕೆಟ್ ನೀಡಲಾಗುವುದು ಎಂದರು.

ಮತ್ತೊಮ್ಮೆ ಕ್ರೌರ್ಯ ಮೆರೆದ ತಾಲಿಬಾನಿಗಳು; ತಂದೆ ಮೇಲಿನ ಸಿಟ್ಟಿಗೆ ಕಂದನ ಕೊಲೆ

ಹಾನಗಲ್ ಹಾಗೂ ಸಿಂಧಗಿ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...