ಹುಬ್ಬಳ್ಳಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಪವಾಸ ಸತ್ಯಾಗ್ರಹ ನಿರ್ಧಾರ ವಾಪಸ್ ತೆಗೆದುಕೊಳ್ಳಲು ಗುಣಧರನಂದಿಶ್ರಿ ನಿರ್ಧರಿಸಿದ್ದಾರೆ.
ಜೈನಮುನಿ ಹತ್ಯೆ ಖಂಡಿಸಿ ಹುಬ್ಬಳ್ಳಿಯ ವರೂರಿನಲ್ಲಿ ಗುಣಧರನಂದಿಶ್ರೀ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗುಣಧರನಂದಿ ಶ್ರಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ ಬೆನ್ನಲ್ಲೇ ಸತ್ಯಾಗ್ರಹ ವಾಪಸ್ ಪಡೆದಿದ್ದಾರೆ.
ಈ ವೇಳೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂದಿಸಲಾಗಿದ್ದು, ಡಿವೈ ಎಸ್ ಪಿ ನೇತೃತ್ವದಲ್ಲಿ ತನಿಖೆ ನಡೆದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಶ್ರೀಗಳಿಗೆ ಭರವಸೆ ನೀಡಿದ್ದೇವೆ ಎಂದರು.
ಇನ್ನು ಸ್ವಾಮೀಜಿಗಳು ನಾಲ್ಕು ಬೇಡಿಕೆ ಇಟ್ಟಿದ್ದಾರೆ. ಜೈನಮುನಿಗಳ ಯಾತ್ರೆ ವೇಳೆರಕ್ಷಣೆ ಕೊಡಬೇಕು. ನಾವು ತಂಗುವ ತಾನ ಅಧಿಕೃತವಾಗಬೇಕು. ಜೈನ ಮಂಡಳಿ ಮಾಡಬೇಕುಹಾಗೂ ಜೈನ ಮಂದಿರಗಳಿಗೆ ರಕ್ಷಣೆ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಸೂಕ್ತವಾಗಿ ಸ್ಪಂದಿಸಿದ್ದಾಗಿ ತಿಳಿಸಿದ್ದಾರೆ.