ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಜೊತೆ ಹೊಂದಾಣಿಕೆ ರಾಜಕೀಯ ಆರೋಪ ನಿರಾಕರಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಪ್ರಮಾಣ ಮಾಡಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಹಾಗೂ ಸಿದ್ದೇಗೌಡ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಯಾವುದೇ ಹೊಂದಾಣಿಕೆ ರಾಜಕೀಯವನ್ನು ನಾನು ಮಾಡಿಲ್ಲ, ಸಿದ್ದರಾಮಯ್ಯನವರಿಗೆ ಮೋಸಮಾಡಿಲ್ಲ, ಉಪ್ಪಿನ ಮೇಲೆ ಪ್ರಮಾಣ ಮಾಡಿ ಹೇಳುತ್ತಿದ್ದೇನೆ ಎಂದು ಉಪ್ಪಿನ ಮೇಲೆ ಕೈಯಿಟ್ಟು ಪ್ರಮಾಣ ಮಾಡಿದ್ದಾರೆ.
ನಾನು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದೇನೆ ಎಂಬ ಆರೋಪ ಮಾಡಲಾಗಿದೆ. ನಾನು ಸ್ವಿಚ್ ಆಫ್ ಮಾಡಿಲ್ಲ. ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ, ಪ್ರಾಮಾಣಿಕವಾಗಿ ಚುನಾವಣೆ ಎದುರಿಸಿದ್ದೇನೆ ಎಂದು ಹೇಳಿದ್ದಾರೆ.