alex Certify BIG NEWS: ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ; ಕೋರ್ ಕಮಿಟಿಯಲ್ಲಿ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಎಂದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ; ಕೋರ್ ಕಮಿಟಿಯಲ್ಲಿ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು; ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿದ್ದು, ಹಾನಗಲ್ ಹಾಗೂ ಸಿಂಧಗಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಪಕ್ಷದ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಉದಾಸಿ ಹಾನಗಲ್ ನಲ್ಲಿ 6 ಬಾರಿ ಶಾಸಕರಾಗಿ ಆಯ್ಕೆಯಾದವರು. ಅವರ ಅಭಿವೃದ್ಧಿ ಕಾರ್ಯಗಳೇ ನಮ್ಮ ಗೆಲುವಿಗೆ ಸಹಕಾರಿಯಾಗಲಿದೆ. ಸಿಂಧಗಿಯಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ. ಬೂತ್ ಮಟ್ಟದಲ್ಲಿ ನಮ್ಮ ಕಾರ್ಯಕರ್ತರಿದ್ದಾರೆ. ಎರಡೂ ಕ್ಷೇತ್ರಕ್ಕೂ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.

ಪಾಕ್‌ ಮಾಜಿ ಕ್ರಿಕೆಟಿಗ ಇಂಜಮಾಮ್​ ಉಲ್​ ಹಕ್​ಗೆ ಹೃದಯಾಘಾತ…..!

ಕೋರ್ ಕಮಿಟಿಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಎರಡೂ ಕ್ಷೇತ್ರಕ್ಕೂ ವೀಕ್ಷಕರನ್ನು ಕಳುಹಿಸುತ್ತೇವೆ. ಅವರು ಸ್ಥಳೀಯರ ಅಭಿಪ್ರಾಯವನ್ನು ಸಂಗ್ರಹಿಸಿ ಬಳಿಕ ಎಲ್ಲರೊಂದಿಗೂ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...