ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ಎರಡು ಕ್ಷೇತ್ರಗಳ ಉಪಚುನಾವಣೆ ಗೆಲುವಿಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಆದರೆ ಎರಡು ಕ್ಷೇತ್ರ ಉಸ್ತುವಾರಿಗಳ ಪಟ್ಟಿಯಿಂದ ಬಿ.ವೈ. ವಿಜಯೇಂದ್ರ ಹೆಸರು ಕೈಬಿಟ್ಟಿರುವ ವಿಚಾರ ಇದೀಗ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಇದೀಗ ಸ್ವತಃ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
BSY ಕೆಳಗಿಳಿತಿದ್ದಂತೆ ವಿಜಯೇಂದ್ರಗೆ ಹಿನ್ನಡೆ: ಉಪಚುನಾವಣೆ ಗೆಲುವಿನ ರೂವಾರಿಗಿಲ್ಲ ಉಸ್ತುವಾರಿ, BL ಸಂತೋಷ್ ವಿರುದ್ಧ ಬೆಂಬಲಿಗರ ಆಕ್ರೋಶ
ಉಪಚುನಾವಣೆ ಎರಡು ಕ್ಷೇತ್ರಗಳ ಉಸ್ತುವಾರಿಗಳ ಪಟ್ಟಿಯಲ್ಲಿ ನನ್ನ ಹೆಸರಿಲ್ಲ ಎನ್ನುವ ಕಾರಣಕ್ಕೆ ಕೆಲವು ಅಭಿಮಾನಿಗಳು, ಕಾರ್ಯಕರ್ತರು ಪಕ್ಷದ ಹಿರಿಯ ನಾಯಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಸರಣಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದು, ಪಕ್ಷ ನೀಡಿದ ಜವಾಬ್ದಾರಿ ನಿರ್ವಹಿಸುವುದು ನನ್ನ ಕರ್ತವ್ಯ. ಪಕ್ಷದ ಗೆಲುವೇ ನಮಗೆ ಮುಖ್ಯ ಹೊರತು ಇನ್ಯಾವುದೂ ಅಲ್ಲ. ಭಿನ್ನಾಭಿಪ್ರಾಯದ ಧ್ವನಿಗಳಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತೆ. ವಿಪಕ್ಷಗಳಿಗೆ ಪರೋಕ್ಷ ನೆರವು ನೀಡಿದಂತಾಗುತ್ತೆ ಎಂದು ಹೇಳಿದ್ದಾರೆ.
‘ಜೀವನದೊಂದಿಗೆ ಜೀವವೂ ಮುಖ್ಯ…’; ಎಲ್ಲರನ್ನು ಆಕರ್ಷಿಸಿದ ಸಿಎಂ ದಸರಾ ಸಂದೇಶ
ಪಕ್ಷ ತೀರ್ಮಾನಿಸಿದಂತೆ ನಮ್ಮೆಲ್ಲ ನಾಯಕರ ಮಾರ್ಗದರ್ಶನದಲ್ಲಿ, ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ನಾವು ಕಾರ್ಯನಿರ್ವಹಿಸೋಣ. ಪಕ್ಷಕ್ಕೆ ಮುಜುಗರ ತರುವಂತಹ ಯಾವುದೇ ವಿಷಯಕ್ಕೂ ನನ್ನ ಸಮ್ಮತಿ ಇಲ್ಲ, ನಮ್ಮ ಪ್ರಯತ್ನ ಪಕ್ಷದ ಹಿತ ಹಾಗೂ ಗೆಲುವಿಗಾಗಿ ವಿನಿಯೋಗವಾಗಬೇಕು ಎಂದಿದ್ದಾರೆ.