
ಉಪ ನೋಂದಣಿ ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದ ಹಿನ್ನೆಲೆಯಲ್ಲಿ 9 ಸಿಬ್ಬಂದಿಗಳು ಹಾಗೂ ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಅಂಚೆ ಇಲಾಖೆ ನೇಮಕಾತಿ: ಜುಲೈ 15 ರಂದು ಅಂಚೆ ಜೀವ ವಿಮೆ ಏಜೆಂಟರ ನೇಮಕಾತಿಗಾಗಿ ನೇರ ಸಂದರ್ಶನ
ಮಂಡ್ಯ ಉಪ ನೋಂದಣಿ ಕಚೇರಿ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ವಿರುದ್ಧ ರಶೀದಿ ತಿದ್ದುಪಡಿ ಮಾಡಿ ಕೋಟ್ಯಂತರ ರೂಪಾಯಿ ವಂಚನೆ ಎಸಗುತ್ತಿದ್ದ ಆರೋಪ ಕೇಳಿಬಂದಿತ್ತು. ಇದೀಗ ಅವ್ಯವಹಾರ ಸಾಬೀತಾಗಿರುವ ಹಿನ್ನೆಲೆಯಲ್ಲಿ ಐವರು ಉಪ ನೋಂದಣಾಧಿಕಾರಿ, ನಾಲ್ವರು ಸಿಬ್ಬಂದಿಗಳನ್ನು ವಜಾ ಮಾಡಲಾಗಿದೆ.