
ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು ಜುಲೈ 19ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.
ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜುಲೈ 22 ಅಂತಿಮ ದಿನವಾಗಿದೆ.
ಆಗಸ್ಟ್ 6 ರಂದು ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು, ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ.