ಬೆಂಗಳೂರು: ಜೆ ಜೆ ನಗರದಲ್ಲಿ ನಡೆದ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಎಚ್ಚತ್ತ ಸಚಿವರು ತಮ್ಮ ಹೇಳಿಕೆ ತಪ್ಪಾಗಿದೆ ಎಂದು ಉಲ್ಟಾ ಹೊಡೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಜೆಜೆ ನಗರದಲ್ಲಿ ನಡೆದ ಚಂದ್ರು ಎಂಬ ಯುವಕನ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ನಾನು ಈ ಹಿಂದೆ ನೀಡಿದ್ದ ಹೇಳಿಕೆ ತಪ್ಪಾಗಿದೆ. ಬೈಕ್ ಟಚ್ ಆಗಿ ಗಲಾಟೆ ಆರಂಭವಾಗಿ ಯುವಕನ ಹತ್ಯೆಯಾಗಿದೆ ಎಂದು ಈಗ ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ. ಹಿಂದಿನ ನನ್ನ ಹೇಳಿಕೆಯಲ್ಲಿ ಪದ ಬಳಕೆಯಲ್ಲಿ ತಪ್ಪಾಗಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ತಕ್ಷಣ ಸಿಕ್ಕ ಮಾಹಿತಿ ಆಧಾರದ ಮೇಲೆ ಈ ಹಿಂದೆ ಹೇಳಿಕೆ ನೀಡಿದ್ದೆ. ಇದೀಗ ಪೊಲೀಸರಿಂದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕಿದೆ. ಬೈಕ್ ಡಿಕ್ಕಿಯಾಗಿ ಗಲಾಟೆ ನಡೆದಿದೆ. ಈ ವೇಳೆ ಚಂದ್ರುಗೆ ಚೂರಿ ಇರಿದಿದ್ದಾರೆ. ರಕ್ತಸ್ರಾವದಿಂದ ಆತ ಮೃತಪಟ್ಟಿದ್ದಾನೆ. ಈಗ ಪೊಲೀಸರು ಈ ಬಗ್ಗೆ ವಿಸ್ತೃತವಾದ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
ಹಾಲಿನ ದರ ಮತ್ತಷ್ಟು ಏರಿಕೆಯಾಗಲಿದೆಯೇ? ಅಮುಲ್ ಎಂಡಿ ಹೇಳೋದೇನು?
ಚಂದ್ರು ಎಂಬ ಯುವಕ ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ದುಷ್ಕರ್ಮಿಗಳು ಚೂರಿಯಿಂದ ಚುಚ್ಚಿ ಚುಚ್ಚಿ ಅಮಾನುಷವಾಗಿ ಆತನನ್ನು ಕೊಲೆ ಮಾಡಿದ್ದಾರೆ. ಆತ ಒಬ್ಬ ದಲಿತ ಯುವಕ ಎಂದು ಈ ಹಿಂದೆ ಗೃಹ ಸಚಿವರು ಹೇಳಿಕೆ ನೀಡಿದ್ದರು. ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.