alex Certify BIG NEWS: ಊರಿಗೆ ಮನುಷ್ಯನೂ ಅಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ; ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ಸ್ಥಿತಿ ಅಯೋಮಯ; ಸಚಿವ ಆರ್.ಅಶೋಕ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಊರಿಗೆ ಮನುಷ್ಯನೂ ಅಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ; ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ಸ್ಥಿತಿ ಅಯೋಮಯ; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ V/S ಡಿ.ಕೆ.ಶಿವಕುಮಾರ್ ಎನ್ನುವಂತಾಗಿದೆ. ಕಾಂಗ್ರೆಸ್ ಸ್ಥಿತಿ ಅಯೋಮಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ಹಿಜಾಬ್ ಪರವಾಗಿ ಮಾತನಾಡಲು ಡಿ.ಕೆ.ಶಿವಕುಮಾರ್ ಬಿಡುತ್ತಿಲ್ಲ, ಹಿಂದೂಗಳ ಪರ ಮಾತನಾಡಲು ಸಿದ್ದರಾಮಯ್ಯ ಬಿಡುತ್ತಿಲ್ಲ ಹೀಗಾಗಿ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ V/S ಡಿ.ಕೆ.ಶಿವಕುಮಾರ್ ಫೈಟ್ ನಡೆಯುತ್ತಿದೆ ಎಂದರು.

100 ಜಿಲ್ಲೆಗಳ ಪ್ರತಿ ಮನೆಗೂ ನಲ್ಲಿ ನೀರಿನ ಸಂಪರ್ಕ: ಕೇಂದ್ರ ಸರ್ಕಾರದ ಮಾಹಿತಿ

ವಿದ್ಯಾರ್ಥಿಗಳ ಬಗ್ಗೆ ಕಾಂಗ್ರೆಸ್ ಗೆ ಕಾಳಜಿಯಿದ್ದರೆ ಅಧಿವೇಶನದಲ್ಲಿ ಹಿಜಾಬ್, ಕೇಸರಿ ಶಾಲಿನ ಬಗ್ಗೆ ಪ್ರಸ್ತಾಪ ಮಾಡಬೇಕಿತ್ತು. ಆದರೆ ಈ ವಿಚಾರವನ್ನು ಕಾಂಗ್ರೆಸ್ ನವರು ಪ್ರಸ್ತಾಪ ಮಾಡುವುದಕ್ಕೇ ಹೋಗುತ್ತಿಲ್ಲ. ಅದೇ ಕಾರಣಕ್ಕಾಗಿ ಈಶ್ವರಪ್ಪ ವಿಚಾರ ಹಿಡಿದುಕೊಂಡಿದ್ದಾರೆ. ಕಾಂಗ್ರೆಸ್ ಸ್ಥಿತಿ ಹೇಗಿದೆ ಎಂದರೆ ಊರಿಗೆ ಮನುಷ್ಯ ಅಲ್ಲ, ಸ್ಮಶಾನಕ್ಕೆ ಹೆಣವಲ್ಲ ಎನ್ನುವಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...