ಧಾರವಾಡ: ರಾಜ್ಯದಲ್ಲಿ ಪುಂಡಾಟ ನಡೆಸುತ್ತಿರುವ ಎಂಇಎಸ್ ನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿವೆ. ಜನಪ್ರತಿನಿಧಿಗಳ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿವೆ.
ರಾಜಧಾನಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಕನ್ನಡ ಚಳುವಳಿ ಹೋರಾಟಗಾರರು ಎಂಇಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ಮಹಾರಾಷ್ಟ್ರ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ತೋರಿ ಆಕ್ರೋಶ ವ್ಯಕ್ತಪಡಿಸಿದರು.
ಮಕ್ಕಳ ಲಸಿಕೆ ಬಗ್ಗೆ ಮಾರ್ಗಸೂಚಿ ಪ್ರಕಟ
ಎಂಇಎಸ್ ನಿಷೇಧದ ಬಗ್ಗೆ ಒತ್ತಾಯಿಸುತ್ತಿದ್ದರೂ ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು ಈ ಬಗ್ಗೆ ಚಕಾರವೆತ್ತುತ್ತಿಲ್ಲ. ಸಚಿವರು, ಶಾಸಕರು ಮೌನವಾಗಿದ್ದಾರೆ. ಇದು ಎಂಇಎಸ್ ಪರ ನಿಲುವನ್ನು ತೋರುತ್ತದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಅಲ್ಲದೇ ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಭಯ್ ಪಾಟೀಲ್, ರಮೇಶ್ ಜಾರಕಿಹೊಳಿ ಫೋಟೋಗಳನ್ನು ಹರಾಜಿಗಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಕರವೇ ನಾರಾಯಣಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ಮಾಡಿ ಎಂಇಎಸ್ ನಿಷೇಧಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲು ಸಜ್ಜಾಗಿದ್ದಾರೆ.