alex Certify BIG NEWS: ಎಂಪೈರ್ ಹೋಟೆಲ್ ನಲ್ಲಿ ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಂಪೈರ್ ಹೋಟೆಲ್ ನಲ್ಲಿ ಅಗ್ನಿ ಅವಘಡ

ಬೆಂಗಳೂರು; ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್ ನ ಎಂಪೈರ್ ಹೋಟೆಲ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ.

ಎಂಪೈರ್ ಹೋಟೆಲ್ ನ ಕೊಠಡಿ ಸಂಖ್ಯೆ 203ರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೋಟೆಲ್ ಸಿಬ್ಬಂದಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...