alex Certify BIG NEWS: ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕಾಗಮಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗಿಂದು ಅದ್ದೂರಿ ಸ್ವಾಗತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕಾಗಮಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗಿಂದು ಅದ್ದೂರಿ ಸ್ವಾಗತ

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದು, ಅವರಿಗೆ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ಅದ್ದೂರಿ ಸ್ವಾಗತ ಕೋರಲಾಗುತ್ತಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ನಡೆಯಲಿದ್ದು, ರಾಜ್ಯ ಕಾಂಗ್ರೆಸ್ ಸಮಿತಿ ವತಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಲಾಗುತ್ತದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...