ನವದೆಹಲಿ: 2023 ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಹೈಕಮಾಂಡ್ ಇಂದು ರಾಜ್ಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್, ಬಿ.ಕೆ. ಹರಿಪ್ರಸಾದ್, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ನಾಯಕರು ದೆಹಲಿಗೆ ತೆರಳಿದ್ದು, ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಭೆಯಲ್ಲಿ 2023ರ ಚುನಾವಣೆ ತಯಾರಿ, ರಾಜ್ಯ ಪ್ರವಾಸ, ಟಿಕೆಟ್ ಆಕಾಂಕ್ಷಿಗಳ ವಿವರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ರಾಜ್ಯ ನಾಯಕರು ಎಐಸಿಸಿ ಅಧ್ಯಕ್ಷರು ಹಾಗೂ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ.