BIG NEWS: ಎಕ್ಸ್ ಪ್ರೆಸ್ ವೇ ಅಪಘಾತದಲ್ಲಿ ಈವರೆಗೆ 150 ಜನರ ದುರ್ಮರಣ; ಇದು ಎಕ್ಸ್ ಪ್ರೆಸ್ ಹೈವೆ ಅಲ್ಲ ಮರಣ ಹೆದ್ದಾರಿ; ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಸಂಭವಿಸುತ್ತಿರುವ ಅಪಘಾತ ಪ್ರಕರಣಗಳ ಬಗ್ಗೆ ರಾಮನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಎಕ್ಸ್ ಪ್ರೆಸ್ ಹೈವೆ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಚಿವರು, ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆಯಲ್ಲಿ ಈವರೆಗೆ 150 ಜನರು ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿರುವುದೇ ಇದಕ್ಕೆ ಕಾರಣ. ಆದರೆ ಈ ಬಗ್ಗೆ ಎಲ್ಲಿಯೂ ಚರ್ಚೆಯಾಗುತ್ತಿಲ್ಲ, ಎಕ್ಸ್ ಪ್ರೆಸ್ ವೇನಲ್ಲಿ ಜನರು ಸಾವನ್ನಪ್ಪುತ್ತಿರುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ, ಬದಲಾಗಿ ಎಕ್ಸ್ ಪ್ರೆಸ್ ವೇ ಮಾಡಿದ ಕೆಲ ಜನರು ಜಂಭಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಎಕ್ಸ್ ಪ್ರೆಸ್ ಹೈವೆಯಲ್ಲಿ ಪ್ರತಿದಿನ ಅಪಘಾತದಲ್ಲಿ ಹಲವರು ಸಾವನ್ನಪ್ಪುತ್ತಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಇದು ಎಕ್ಸ್ ಪ್ರೆಸ್ ವೇ ಅಲ್ಲ ಮರಣ ಹೆದ್ದಾರಿಯಾಗಿದೆ. ಹೆದ್ದಾರಿಯಲ್ಲಿದ್ದ ಬಸ್ ನಿಲ್ದಾಣಗಳನ್ನು ತೆರವು ಮಾಡಲಾಗಿದೆ. ಸಮಸ್ಯೆಯನ್ನು ಮೊದಲು ಸರಿಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read