ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತೆ ಮಂಥರ್ ಗೌಡ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಿರುವುದಕ್ಕೆ ಎ. ಮಂಜು ಅವರ ವಿರುದ್ಧ ಬಿಜೆಪಿ ಶಿಸ್ತು ಕ್ರಮ ಕೈಗೊಂಡಿದೆ. ಇದೇ ಕ್ರಮವನ್ನು ಜಾರಕಿಹೊಳಿ ಸಹೋದರರ ವಿರುದ್ಧ ಕೈಗೊಳ್ಳಲು ಸಾಧ್ಯವೇ ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಲಖನ್ ಜಾರಕಿಹೊಳಿ ಬಂಡಾಯಕ್ಕೆ ಬಾಲಚಂದ್ರ ಮತ್ತು ರಮೇಶ್ ಜಾರಕಿಹೊಳಿ ವಿರುದ್ಧವೂ ಇದೇ ಶಿಸ್ತು ಕ್ರಮ ಕೈಗೊಳ್ಳುವ ಧೈರ್ಯವಿದೆಯೇ ಬಿಜೆಪಿಗೆ ? ಅಥವಾ ಉತ್ತರ ಕುಮಾರನ ಪೌರುಷ ಒಲೆಯ ಮುಂದೆ ಮಾತ್ರವೇ ? ಎಂದು ಕೇಳಿದೆ.
ಬಿಜೆಪಿ ಬ್ರಹ್ಮಾಸ್ತ್ರ ಗುಬ್ಬಿಯ ಮೇಲೆ ಮಾತ್ರ. ಎ. ಮಂಜು ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಮಂಜು ಅವರಿಗೆ ನೀಡಿದ್ದ ಪಕ್ಷದ ಜವಾಬ್ದಾರಿಯನ್ನು ಬಿಜೆಪಿ ವಾಪಸ್ ಪಡೆದಿದೆ. ಶರತ್ ಬಚ್ಚೇಗೌಡರ ಬಂಡಾಯಕ್ಕೆ ಬಚ್ಚೇಗೌಡರ ಮೇಲೆ ಕ್ರಮ ಕೈಗೊಳ್ಳಲಿಲ್ಲ. ಲಖನ್ ಜಾರಕೊಹೊಳಿ ಬಂಡಾಯಕ್ಕೆ ರಮೇಶ್ ಹಾಗೂ ಬಾಲಚಂದ್ರ ಜಾರಕಿಹೊಳಿ ಮೇಲೆ ಕ್ರಮ ಕೈಗೊಳ್ಳಲಿಲ್ಲ. ಬಿಜೆಪಿ ಅಂಗಡಿಯಲ್ಲಿ ಪ್ರಭಾವ ನೋಡಿ ಸುಣ್ಣ, ಬೆಣ್ಣೆ ಹಂಚಲಾಗುತ್ತಿದೆ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.
https://twitter.com/INCKarnataka/status/1463427864150167555