ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಇಂದು ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಏನಾಗುತ್ತೆ ನೋಡೋಣ. ನನಗೆ ನ್ಯಾಯ ಸಿಗುತ್ತೆ ಎಂಬ ವಿಶ್ವಾಸವಿದೆ ಎಂದರು.
ನಾನು ಯಾವುದೇ ತಪ್ಪು ಮಾಡಿಲ್ಲ, ನನಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಈ ನಡುವೆ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿ ಎಸ್ ವೈ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.