ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ 90ನೇ ಮನ್ ಕಿ ಭಾತ್ ನಲ್ಲಿ 1975ರ ತುರ್ತು ಪರಿಸ್ಥಿತಿ ಬಗ್ಗೆ ನೆನೆಪಸಿಕೊಂಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಅಲುಗಾಡಿಸಲಾಗದು. ದೇಶದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯ ಸಂಕಷ್ಟಗಳನ್ನು ನಾವು ಮರೆಯುವಂತಿಲ್ಲ ಎಂದು ಹೇಳಿದ್ದಾರೆ.
ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದಾಗ ದೇಶದಲ್ಲಿ ನಾಗರಿಕರ ಎಲ್ಲ ಹಕ್ಕುಗಳು ದಮನಗೊಂಡವು. ಸಂವಿಧಾನದ 21ನೇ ಪರಿಚ್ಛೇದ ನೀಡಿರುವ ಜೀವಿಸುವ ಹಕ್ಕು, ವೈಯಕ್ತಿಕ ಸ್ವಾತಂತ್ರ್ಯದ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿತ್ತು. ಸಾವಿರಾರು ಜನರನ್ನು ಬಂಧಿಸಲಾಯಿತು. ಲಕ್ಷಾಂತರ ಭಾರತೀಯರ ಮೇಲೆ ದೌರ್ಜನ್ಯಗಳು ನಡೆದವು. ಆದರೂ ಪ್ರಜಾಪ್ರಭುತ್ವದ ಬಗ್ಗೆ ನಂಬಿಕೆ ಕಳೆದುಕೊಳ್ಳಲಿಲ್ಲ. ನಮ್ಮ ರಕ್ತನಾಳದಲ್ಲಿಯೇ ಪ್ರಜಾಪ್ರಭುತ್ವದ ಮೌಲ್ಯಗಳು ಹರಿಯುತ್ತಿವೆ ಎಂದು ತಿಳಿಸಿದರು.
ಬಾಹ್ಯಾಕಾಶ ಕ್ಷೇತ್ರದಲ್ಲಿ ಹಲವು ಸ್ಟಾರ್ಟಪ್ ಗಳು ಕೆಲಸ ಮಾಡುತ್ತಿವೆ. ಭಾರತ ಬಾಹ್ಯಾಕಾಶ ಕ್ಷೇತ್ರದ ಮಹಾನ್ ಶಕ್ತಿಯಾಗಿ ಹೊರಹೊಮ್ಮಲಿದೆ. ವಿದ್ಯಾರ್ಥಿಗಳು ಸಣ್ಣಪುಟ್ಟ ಉಪಗ್ರಹಗಳನ್ನು ರೂಪಿಸುತ್ತಿದ್ದಾರೆ ಎಂದು ಹೇಳಿದರು.