alex Certify BIG NEWS: ಎರಡು ಕಾರು ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ಕಾರು ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಕಾರವಾರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಣಕೋಣದ ತಾರಿ ಬಳಿ ನಡೆದಿದೆ.

ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 35 ವರ್ಷದ ಹರೀಶ್ ಉಲ್ಲಾಸ್ ನಾಗೇಕರ್, 60 ವರ್ಷದ ಉಲ್ಲಾಸ ರಾಮ ನಾಗೇಕರ್ ಹಾಗೂ 60 ವರ್ಷದ ವೀಣಾ ಉಲ್ಲಾಸ್ ನಾಗೇಕರ್ ಮೃತರು.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮೂವರೂ ಉತ್ತರ ಕನ್ನಡ ಜಿಲ್ಲೆಯ ಕಾರವರದ ಮಾಜಾಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಕಾಣಕೋಣ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...