alex Certify BIG NEWS: ಎರಡು ದಿನಗಳಿಂದ ಮತ್ತೆ ಹೆಚ್ಚುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ದಿನಗಳಿಂದ ಮತ್ತೆ ಹೆಚ್ಚುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 45,892 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,07,09,557 ತಲುಪಿದೆ.

ಕಳೆದ 24 ಗಂಟೆಯಲ್ಲಿ 817 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,05,028ಕ್ಕೆ ಏರಿಕೆಯಾಗಿದೆ.

ಶಾಕಿಂಗ್..! ಶತಕದ ನಂತರವೂ ನಾಟೌಟ್ -ಇಂದೂ ಏರಿಕೆಯಾಯ್ತು ಇಂಧನ ದರ; ಪೆಟ್ರೋಲ್ 35 ಪೈಸೆ, ಡೀಸೆಲ್ 9 ಪೈಸೆ ಹೆಚ್ಚಳ

ಇನ್ನು ದೇಶದಲ್ಲಿ 4,60,704 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,98,43,825 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 44,291 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 36,48,47,549 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...