alex Certify BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಬಳಿ ನಡೆದಿದೆ.

ಇಲ್ಲಿನ ಹೂವಿನಬಾವಿ ಬಳಿ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಶಿರೋಳ್ಳಿಯ ಜಗನ್ನಾಥ್ ಚಕ್ಕುಲಿ (35), ಮೆಹಬೂಬ್ ಅಲಿ (45) ಹಾಗೂ ಶಾದಿಪುರದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ. ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಲೇಪೇಠ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...