alex Certify BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ವಿಜಯನಗರದ ಪ್ರಶಾಂತ ನಗರದಲ್ಲಿ ಈ ದುರಂತ ಸಂಭವಿಸಿದ್ದು, ಬೈಕ್ ಗೆ ಎದುರಿನಿಂದ ಬರುತ್ತಿದ್ದ ಸ್ಕೂಟಿ ಸ್ಕಿಡ್ ಆಗಿ ಡಿಕ್ಕಿ ಹೊಡೆದಿದೆ. ಸ್ಕೂಟಿಯಲ್ಲಿ ಇಬ್ಬರು ಯುವಕರು ಇದ್ದರು. ಇಬ್ಬರು ಹೆಲ್ಮೆಟ್ ಧರಿಸಿರಲಿಲ್ಲ. ಅಪಘಾತದ ರಭಸಕ್ಕೆ ಮೂವರು ಕೆಳಗೆ ಬಿದ್ದಿದ್ದಾರೆ. ಬೈಕ್ ಸವಾರ ತಕ್ಷಣ ಎದ್ದು ನಿಂತಿದ್ದಾನೆ. ಆದರೆ ಸ್ಕೂಟಿಯಲ್ಲಿ ಬಂದಿದ್ದ ಯುವಕನ ತಲೆ ರಸ್ತೆಗೆ ಜಜ್ಜಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಸ್ಕೂಟಿಯಲ್ಲಿದ್ದ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತನನ್ನು ಮಿಥುನ್ ಎಂದು ಗುರುತಿಸಲಾಗಿದೆ. ನಿನ್ನೆ ಈ ಅಪಘಾತ ಸಂಭವಿಸಿದ್ದು, ಸಿಸಿ ಟಿವಿ ಕ್ಯಾಮರಾದಲ್ಲಿ ಅಪಘಾತದ ಘೋರ ದೃಶ್ಯ ಸೆರೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...