alex Certify BIG NEWS: ಎರಡು ರೈಲುಗಳ ನಡುವೆ ಭೀಕರ ಅಪಘಾತ; ಹಳಿ ತಪ್ಪಿದ 12 ಬೋಗಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ರೈಲುಗಳ ನಡುವೆ ಭೀಕರ ಅಪಘಾತ; ಹಳಿ ತಪ್ಪಿದ 12 ಬೋಗಿಗಳು

ಕೋಲ್ಕತ್ತಾ: ಬಾಲಸೋರ್ ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತ ದುರಂತ ಮಾಸುವ ಮುನ್ನ ಅಂತದ್ದೇ ಮತ್ತೊಂದು ಅಪಘಾತ ಸಂಭವಿಸಿದ್ದು, ಎರಡು ಗೂಡ್ಸ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಪಶ್ಚಿಮ ಬಂಗಾಳದ ಓಂಡಾ ರೈಲು ನಿಲ್ದಾಣದ ಬಳಿ ನಡೆದಿದೆ.

ಗೂಡ್ಸ್ ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಗೆ ಪ್ರವೇಶಿಸಿದೆ. ಹಳಿಯಲ್ಲಿದ್ದ ಮತ್ತೊಂದು ಸರಕು ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 12 ಬೋಗಿಗಳು ಹಳಿ ತಪ್ಪಿವೆ.

ರೈಲು ಅಪಘಾತ ಹಿನ್ನೆಲೆಯಲ್ಲಿ ಖರಗ್ ಪುರ-ಬಂಕುರಾ-ಆದ್ರಾ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...