alex Certify BIG NEWS: ಎಲೆಕ್ಟ್ರಿಕ್ ಬೈಕ್ ಗಳ 1000 ಚಾರ್ಜಿಂಗ್ ಸೌಲಭ್ಯ ಸ್ಥಾಪನೆ; ಎಥರ್-ಎಸ್ಕಾಂ ನಡುವೆ ಒಪ್ಪಂದಕ್ಕೆ ಸಹಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲೆಕ್ಟ್ರಿಕ್ ಬೈಕ್ ಗಳ 1000 ಚಾರ್ಜಿಂಗ್ ಸೌಲಭ್ಯ ಸ್ಥಾಪನೆ; ಎಥರ್-ಎಸ್ಕಾಂ ನಡುವೆ ಒಪ್ಪಂದಕ್ಕೆ ಸಹಿ

ಬೆಂಗಳೂರು: ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ.ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಹಿ ಹಾಕಲಾಯಿತು.

ಎಥರ್ ಎನರ್ಜಿ ಕಂಪನಿಯು ವಿದ್ಯುತ್ ದ್ವಿಚಕ್ರ ವಾಹನಗಳಿಗೆ ಉಚಿತವಾಗಿ ಚಾರ್ಜಿಂಗ್ ಸೌಲಭ್ಯಗಳನ್ನು ಕಲ್ಪಿಸಲಿವೆ. ಈ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದೆ.

ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಎಥರ್ ಎನರ್ಜಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ತರುಣ್ ಮೆಹ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಈ ಒಪ್ಪಂದಕ್ಕೆ ಸಹಿ ಮಾಡಿದರು.

ಈ ವೇಳೆ ಶಾಸಕ ಅರವಿಂದ ಬೆಲ್ಲದ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...