ಬೆಂಗಳೂರು: ವೋಟರ್ ಐಡಿ ಅಕ್ರಮದಲ್ಲಿ ಸಚಿವ ಅಶ್ವತ್ಥನಾರಾಯಣ ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಸಚಿವರು, ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವೋಟರ್ ಐಡಿ ಅಕ್ರಮದಲ್ಲಿ ನಾನು ಭಾಗಿಯಾಗಿಲ್ಲ. ಚಿಲುಮೆ ಎನ್ ಜಿ ಒ ಸಂಸ್ಥೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಇನ್ನು ಕಾಂಗ್ರೆಸ್ ನಾಯಕರು ಪದೇ ಪದೇ ನನ್ನ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದಾರೆ. ಅವರೆಲ್ಲರ ವಿರುದ್ಧ ಮಾನನಷ್ಟ ಕೊಕದ್ದಮೆ ದಾಖಲಿಸಬೇಕು ಎಂದುಕೊಂಡಿದ್ದೇನೆ ಎಂದರು.
ಕಾಂಗ್ರೆಸ್ ನವರು ಸಾಕಷ್ಟು ಬಾರಿ ನನ್ನ ವಿರುದ್ಧ ನಿರಾಧಾರವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಮಾಡಲು ಹೊರಟಿದ್ದಾರೆ. ಇದ್ಯಾವುದೂ ನನ್ನ ಬಳಿ ನಡೆಯಲ್ಲ. ಎಲ್ಲರ ಮೇಲೂ ಮಾನನಷ್ಟ ಕೇಸ್ ದಾಖಲಿಸುತ್ತೇನೆ ಎಂದು ಹೇಳಿದರು.