BIG NEWS: ಎಲ್ಲವನ್ನೂ ಬಂದವರ ತಲೆ ಮೇಲೆ ಕಟ್ಟುವುದು ಸರಿಯಲ್ಲ; ಈಶ್ವರಪ್ಪಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಿ.ಟಿ. ರವಿ

ಚಿಕ್ಕಮಗಳೂರು: ಆಪರೇಷನ್ ಕಮಲದಿಂದಲೇ ಬಿಜೆಪಿಗೆ ಮುಳುವಾಗಿದೆ, ವಲಸಿಗ ಶಾಸಕರಿಂದಲೇ ಬಿಜೆಪಿಗೆ ಸೋಲಾಯಿತು ಎಂದು ಆರೋಪಿಸಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ನಾನು ಇದರ ಬಗ್ಗೆ ಸಾರ್ವಜನಿಕ ಚರ್ಚೆಗೆ ಹೋಗಲ್ಲ, ಎಲ್ಲವನ್ನೂ ಬಂದವರ ತಲೆ ಮೇಲೆ ಕಟ್ಟುವುದು ಸರಿಯಲ್ಲ. ಪಕ್ಷದ ಸೋಲಿಗೆ ನಮ್ಮಲ್ಲಿಯೂ ಹಲವಾರು ತಪ್ಪುಗಳಿದ್ದವು ಎಂದು ಹೇಳಿದ್ದಾರೆ.

ಯಾರು ಸರಿ ಎಂದೂ ನಾನೂ ಹೇಳುವುದಿಲ್ಲ. ನಮ್ಮಿಂದ ಏನೂ ತಪ್ಪು ಆಗಿಲ್ಲ ಅನ್ನೋದು ಬೇಡ. ಕೆಲವು ತಪ್ಪಾಗಿದೆ. ಆ ತಪ್ಪು ಆಗದಂತೆ ಮುಂದೆ ಹೋಗೋಣ. ಎಲ್ಲವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸೋಣ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read