
ನವದೆಹಲಿ: ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಜ್ವರದ ಪ್ರಕರಣಗಳು ಹೆಚ್ಚುತ್ತಿದ್ದು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದಿದೆ.
ಕೇಂದ್ರ ಆರೋಗ್ಯ ಸಚಿವ ಡಾ.ಮಾನ್ಸುಖ್ ಮಾಂಡವೀಯ ನೇತೃತ್ವದಲ್ಲಿ ನಾಳೆ ವರ್ಚುವಲ್ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಕೇರಳದಲ್ಲಿ ಚಿಕೂನ್ ಗುನ್ಯಾ, ಡೆಂಘೀ, ಹಕ್ಕಿ ಜ್ವರ, ಹೆಚ್1 ಎನ್1 ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಆರೋಗ್ಯ ಇಲಾಖೆ ಶಾಲಾ-ಕಾಲೇಜುಗಳಿಗೆ ಕಟ್ಟೆಚ್ಚರಕ್ಕೆ ಸೂಚಿಸಿದೆ.