ಬೆಂಗಳೂರು: ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ.
ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಜೆ.ಮಾಧುಸ್ವಾಮಿ, ಎಸ್ ಸಿ ಸಮುದಾಯದಲ್ಲಿ 103 ಜಾತಿಗಳಿವೆ, ಎಸ್ ಟಿ ಸಮುದಾಯದಲ್ಲಿ 56 ಜಾತಿಗಳಿವೆ. ಸುಗ್ರೀವಾಜ್ಞೆ ಮೂಲಕ ಈ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಲಾಗುವುದು ಎಂದು ಹೇಳಿದರು.
ಮೀಸಲಾತಿ ಹೆಚ್ಚಳಕ್ಕೆ ಈ ಮೊದಲು ಆಡಳಿತಾತ್ಮಕ ಆದೇಶಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಈಗ ಕಾನೂನು ಪರಿಮಿತಿಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ನಿರ್ಧರಿಸಲಾಗಿದೆ ಎಂದರು.