alex Certify BIG NEWS: ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ; ಸುಗ್ರೀವಾಜ್ಞೆ ಮೂಲಕ ಜಾರಿಗೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ; ಸುಗ್ರೀವಾಜ್ಞೆ ಮೂಲಕ ಜಾರಿಗೆ ನಿರ್ಧಾರ

ಬೆಂಗಳೂರು: ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ.

ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಜೆ.ಮಾಧುಸ್ವಾಮಿ, ಎಸ್ ಸಿ ಸಮುದಾಯದಲ್ಲಿ 103 ಜಾತಿಗಳಿವೆ, ಎಸ್ ಟಿ ಸಮುದಾಯದಲ್ಲಿ 56 ಜಾತಿಗಳಿವೆ. ಸುಗ್ರೀವಾಜ್ಞೆ ಮೂಲಕ ಈ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಲಾಗುವುದು ಎಂದು ಹೇಳಿದರು.

ಮೀಸಲಾತಿ ಹೆಚ್ಚಳಕ್ಕೆ ಈ ಮೊದಲು ಆಡಳಿತಾತ್ಮಕ ಆದೇಶಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಈಗ ಕಾನೂನು ಪರಿಮಿತಿಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ನಿರ್ಧರಿಸಲಾಗಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...