ಕಲಬುರ್ಗಿ: ರಾಜ್ಯಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ಮೊದಲ ದಿನವೇ ಕನ್ನಡ ಭಾಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.
ಕನ್ನಡ ಪ್ರಶ್ನೆ ಪತ್ರಿಕೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ವಾಟ್ಸಪ್ ನಲ್ಲಿ ಹರಿಬಿಟ್ಟಿದ್ದಾರೆ.
ಆದರೆ ಈವರೆಗೂ ಯಾವುದೇ ಅಧಿಕಾರಿಗಳು ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಖಚಿತಪಡಿಸಿಲ್ಲ. ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಏಪ್ರಿಲ್ 15ರವರೆಗೆ ನಡೆಯಲಿದೆ.