ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ನುಗ್ಗಿದ ಘಟನೆ ಚಾಮರಾಜನಗರ ಜಿಲ್ಲೆಯ ಸಂತೆಮರಹಳ್ಳಿ ಬಳಿ ನಡೆದಿದೆ.
50 ಜನರು ಪ್ರಯಾಣಿಸುತ್ತಿದ್ದ ಬಸ್ ರಸ್ತೆ ಬದಿಯ ತುಂಬಿದ ಕೆರೆಗೆ ನುಗ್ಗಿದ್ದು, ಪ್ರಯಾಣಿಕರು ಬಸ್ ನ ಕಿಟಕಿ, ಹಿಂಬದಿಯ ಬಾಗಿಲಿಂದ ಹೊರಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಚಾಮರಾಜನಗರದಿಂದ ಸಂತೇಮರಹಳ್ಳಿಗೆ ತೆರಳುತ್ತಿದ್ದ ಬಸ್ ಟೈಯರ್ ಬ್ಲಾಸ್ಟ್ ಆಗಿ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಕೆರೆಗೆ ನುಗ್ಗಿದೆ ಎಂದು ತಿಳಿದುಬಂದಿದೆ.