alex Certify BIG NEWS: ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ; ಇಬ್ಬರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ; ಇಬ್ಬರು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಏರ್ ಪೋರ್ಟ್ ರಸ್ತೆಯ ಫ್ಲೈ ಓವರ್ ನಲ್ಲಿ ಬೈಕ್ ಅಪಘಾತಕ್ಕೀಡಾಗಿದೆ. ವೇಗವಾಗಿ ಬಂದ ಬೈಕ್ ಎಲಿವೇಟೆಡ್ ರಸ್ತೆ ಫ್ಲೈ ಓವರ್ ತಡೆಗೋಡೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದೆ. ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಭಾರತ ಮೂಲದ ವಿಕ್ರಮ್ (28) ಹಾಗೂ ಅಮಿತ್ ಸಿಂಗ್ (27) ಮೃತರು. ಸೌರಭ್ (27) ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...