alex Certify BIG NEWS: ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಕಾರಣಕ್ಕೆ ಎರಡು ವರ್ಷಗಳಿಂದ ಬ್ರೇಕ್ ಬಿದ್ದಿದ್ದ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕೊನೆಗೂ ಬಿಬಿಎಂಪಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಕರಗ ಉತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಲಾಗಿದ್ದು, ಮಾರ್ಚ್ 8ರಂದು ದ್ರೌಪದಮ್ಮ ಕರಗ ಉತ್ಸವ ನಡೆಯಲಿದೆ. ಈ ಬಾರಿ ಕರಗ ಉತ್ಸವಕ್ಕೆ ಬಿಬಿಎಂಪಿಯಿಂದ ಒಂದುವರೆ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕೇವಲ ಧಾರ್ಮಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಕರಗ ಉತ್ಸವಕ್ಕೆ ಅನುಮತಿ ನೀಡಲಾಗಿರುವ ಹಿನ್ನೆಲೆಯಲ್ಲಿ ಈ ಬಾರಿ 50 ಸಾವಿರಕ್ಕೂ ಅಧಿಕ ಜನರು ಭಾಗಿಯಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರಿನ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದ್ರೌಪದಮ್ಮ ದೇವಸ್ಥಾನದಲ್ಲಿ ಕರಗ ಸಿದ್ಧತೆ ಕೂಡ ಆರಂಭವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...