ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಇದರ ಮಧ್ಯೆ ಮಂಕಿ ಪಾಕ್ಸ್ ಆತಂಕವೂ ಕಾಡುತ್ತಿದೆ.
ಕರ್ನಾಟಕದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಐದೂವರೆ ತಿಂಗಳ ಬಳಿಕ ಬುಧವಾರದಂದು ಇದೇ ಮೊದಲ ಬಾರಿಗೆ ಗರಿಷ್ಠ ಕೊರೊನಾ ಸೋಂಕಿನ ಪ್ರಕರಣ ವರದಿಯಾಗಿದೆ.
ಬುಧವಾರದಂದು 2,136 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಪೈಕಿ ಬೆಂಗಳೂರು ನಗರದ 62 ವರ್ಷದ ಪುರುಷ ಹಾಗೂ ಬಳ್ಳಾರಿಯ 54 ವರ್ಷದ ಮಹಿಳೆ ಸೇರಿದ್ದಾರೆ.